ಪಣಜಿ (ಡಿ. 7): ಉತ್ತರ ಗೋವಾದ ಆರ್ಪೋರಾ ಗ್ರಾಮದಲ್ಲಿರುವ ಜನಪ್ರಿಯ ನೈಟ್‌ಕ್ಲಬ್‌ವೊಂದರಲ್ಲಿ ಶನಿವಾರ ತಡರಾತ್ರಿ ಸಿಲಿಂಡರ್ ಸ್ಫೋಟಗೊಂಡ ನಂತರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಒಟ್ಟು 23 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಲ್ಲಿ ಬಹುತೇಕರು ನೈಟ್‌ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು, ಮೂವರು ಮಹಿಳೆಯರು ಹಾಗೂ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರೂ ಸೇರಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸ್ಪಷ್ಟಪಡಿಸಿದ್ದಾರೆ.ಉಸಿರುಗಟ್ಟುವಿಕೆಯಿಂದಲೇ ಅಧಿಕ ಸಾವುದುರಂತ ಸಂಭವಿಸಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾವನ್ನಪ್ಪಿದ 23 ಜನರಲ್ಲಿ ಕೇವಲ ಮೂವರು ಮಾತ್ರ ಸುಟ್ಟ ಗಾಯಗಳಿಂದ ಪ್ರಾಣ ಕಳೆದುಕೊಂಡಿದ್ದಾರೆ. ಉಳಿದ 20 ಜನರು ಹೊಗೆ ಮತ್ತು ವಿಷಕಾರಿ ಅನಿಲಗಳಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದರು.

