ಭಾರೀ ಮಳೆ, ಚಳಿಯಿಂದ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಶೇ. 19.55 ಇಳಿಕೆ: ಸಚಿವ ತಿಮ್ಮಾಪುರ

ಭಾರೀ ಮಳೆ, ಚಳಿಯಿಂದ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಶೇ. 19.55 ಇಳಿಕೆ: ಸಚಿವ ತಿಮ್ಮಾಪುರ

ಬೆಳಗಾವಿ: (ಡಿಸೆಂಬರ್ 8): ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರು ಇಂದು ಹೇಳಿದ್ದಾರೆ. ಈ ವರ್ಷ ರಾಜ್ಯದಲ್ಲಿ ಸುರಿದ ಭಾರೀ ಮಳೆ ಮತ್ತು ವಿಪರೀತ ಚಳಿಯೇ ಮಾರಾಟ ಕುಸಿತಕ್ಕೆ ಪ್ರಮುಖ ಕಾರಣ ಎಂದು ಅವರು ವಿಧಾನ ಪರಿಷತ್ತಿನಲ್ಲಿ ಮಾಹಿತಿ ನೀಡಿದ್ದಾರೆ.

ಸಚಿವರು ನೀಡಿದ ಮಾಹಿತಿ ಪ್ರಕಾರ, ಸೆಪ್ಟೆಂಬರ್ 2025 ರವರೆಗೆ ರಾಜ್ಯದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 47.46 ಲಕ್ಷ ಬಾಕ್ಸ್‌ಗಳಷ್ಟು ಕಡಿಮೆಯಾಗಿದೆ. ಮದ್ಯ ಮಾರಾಟ ಮಾರುಕಟ್ಟೆಯಲ್ಲಿ ಇದು ಶೇ. 19.55 ರ ಋಣಾತ್ಮಕ ಬೆಳವಣಿಗೆಯನ್ನು ಸೂಚಿಸುತ್ತದೆ.

ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ಎಂಎಲ್‌ಸಿ ಕೆ. ಎಸ್. ನವೀನ್ ಅವರು ವಿಧಾನ ಪರಿಷತ್ತಿನ ನಿಯಮ 330 ರ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

ಇದೇ ವೇಳೆ, ಮದ್ಯಪಾನ ಮಾಡುವವರಲ್ಲಿ ಯಕೃತ್ತಿನ ಸಿರೋಸಿಸ್ ಮತ್ತು ಕಾಮಾಲೆ ರೋಗದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ಸದಸ್ಯರು ಕಳವಳ ವ್ಯಕ್ತಪಡಿಸಿದರು. ಅವರ ಉತ್ತಮ ಚಿಕಿತ್ಸೆಗಾಗಿ ಅಬಕಾರಿ ಇಲಾಖೆಯ ಆದಾಯದ ಕನಿಷ್ಠ ಶೇ. 20 ರಷ್ಟನ್ನು ಮೀಸಲಿಡಬೇಕು ಎಂದು ಶಾಸಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರು.

ರಾಜ್ಯ