ಮಂಡ್ಯ(ಡಿಸೆಂಬರ್ 8): ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಮತ್ತು ಇತರೆ ಜಾನುವಾರು ಭಾಗಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಚಾಲಕ ಸೇರಿ ಇಬ್ಬರು ವ್ಯಕ್ತಿಗಳನ್ನು ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಚಾಲಕ ಅರ್ಬಾಜ್ ಖಾನ್ (21) ಮತ್ತು ಆತನ ಸಹಚರ, ಚರ್ಮ ವ್ಯಾಪಾರಿ ಮೊಹಮ್ಮದ್ ಸಮಿಲ್ (43) ಬಂಧಿತ ಆರೋಪಿಗಳಾಗಿದ್ದಾರೆ.ಭಾನುವಾರ ತಡರಾತ್ರಿ ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮವಾಹಿನಿ ಸಮೀಪ ನಡೆಸಿದ ಕಾರ್ಯಾಚರಣೆಯಲ್ಲಿ ವಾಹನವನ್ನು ತಡೆದು, ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ.

