ಗೋವಾದಲ್ಲಿರುವ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ನಡೆಯುತ್ತಿರುವ ಸಾರ್ಧ ಪಂಚ ಶತಮಾನೋತ್ಸವ (೫೫೦ನೇ ವರ್ಷಾಚರಣೆ) ಕಾರ್ಯಕ್ರಮದ ಅಂಗವಾಗಿ, ದಿನಾಂಕ 08-12-2025 ರಂದು ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಶ್ರೀ ಮಠಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿಧ್ಯಾದೀಶತೀರ್ಥ ಶ್ರೀಪಾದ ವಡೆಯರ್ ಸ್ವಾಮಿಜಿಗಳವರ ಆಶೀರ್ವಾದಮಂತ್ರಾಕ್ಷತೆಯನ್ನು ಸ್ವೀಕರಿಸಿದರು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಪ್ರದೀಪ್ ಪೈ, ಹಾಗೂ ಪಕ್ಷದ ಮುಖಂಡರಾದ ಶ್ರೀ ಸುದರ್ಶನ್ ಮೂಡುಬಿದಿರೆ, ಶ್ರೀ ಸುಧೀರ್ ಕಣ್ಣೂರು, ಶ್ರೀ ವಿಜಯ ಕುಮಾರ್ ಶೆಟ್ಟಿ ಸೇರಿದಂತೆ ಮಠದ ಪ್ರಮುಖರು ಮತ್ತು ಗಣ್ಯರು ಉಪಸ್ಥಿತರಿದ್ದರು.

