ಧರ್ಮಶಾಲಾ: ಭಾರತದ ವೇಗಿಗಳ ಅಮೋಘ ಪ್ರದರ್ಶನ ಮತ್ತು ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಸಿಡಿಲಬ್ಬರದ ಬ್ಯಾಟಿಂಗ್ನಿಂದಾಗಿ ಟೀಮ್ ಇಂಡಿಯಾ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್ಗಳ ಸುಲಭ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ನಾಯಕ ಸೂರ್ಯಕುಮಾರ್ ಯಾದವ್ ಅವರ ನಿರ್ಧಾರ ಸರಿಯೆಂದು ವೇಗಿಗಳು ಸಾಬೀತುಪಡಿಸಿದರು. ಹೊಸ ಚೆಂಡಿನಲ್ಲಿ ಅವರು ಪ್ರದರ್ಶಿಸಿದ ಸ್ವಿಂಗ್ ಬೌಲಿಂಗ್ ದಕ್ಷಿಣ ಆಫ್ರಿಕಾದ ಟಾಪ್ ಆರ್ಡರ್ ಬ್ಯಾಟ್ಸ್ಮನ್ಗಳನ್ನು ಸಂಪೂರ್ಣವಾಗಿ ಕಂಗೆಡಿಸಿತು.
ದಕ್ಷಿಣ ಆಫ್ರಿಕಾ ತಂಡವು ಭಾರತದ ವೇಗಿಗಳ ದಾಳಿಗೆ ತತ್ತರಿಸಿ ಕೇವಲ 117 ರನ್ಗಳ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ನಾಯಕ ಏಡೆನ್ ಮಾರ್ಕ್ರಾಮ್ (61 ರನ್, 46 ಎಸೆತ) ಹೊರತುಪಡಿಸಿದರೆ ಬೇರೆ ಯಾವ ಆಟಗಾರನೂ ಗಮನಾರ್ಹ ಪ್ರದರ್ಶನ ನೀಡಲಿಲ್ಲ. ಭಾರತದ ಪರ ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್ ಮತ್ತು ಹರ್ಷಿತ್ ರಾಣಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.
ಸುಲಭ ಗುರಿ ಬೆನ್ನತ್ತಿದ ಭಾರತಕ್ಕೆ ಉಪನಾಯಕ ಶುಭಮನ್ ಗಿಲ್ (28 ರನ್, 28 ಎಸೆತ) ಮತ್ತು ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (35 ರನ್, 18 ಎಸೆತ) ಭರ್ಜರಿ ಆರಂಭ ನೀಡಿದರು. ಅಭಿಷೇಕ್ ಶರ್ಮಾ ಕೇವಲ 18 ಎಸೆತಗಳಲ್ಲಿ 35 ರನ್ ಸಿಡಿಸಿ ಭಾರತದ ಗೆಲುವನ್ನು ಸುಗಮಗೊಳಿಸಿದರು. ಕೇವಲ 5.2 ಓವರ್ಗಳಲ್ಲಿ ಈ ಜೋಡಿ 60 ರನ್ಗಳ ಜೊತೆಯಾಟವಾಡಿ, ದಕ್ಷಿಣ ಆಫ್ರಿಕಾದ ಸರಣಿ ಸಮಬಲದ ಕನಸನ್ನು ನುಚ್ಚುನೂರು ಮಾಡಿದರು.ನಂತರ ಬಂದ ಭಾರತೀಯ ಬ್ಯಾಟ್ಸ್ಮನ್ಗಳು ಯಾವುದೇ ಒತ್ತಡವಿಲ್ಲದೆ ಆಡಿ 15.5 ಓವರ್ಗಳಲ್ಲಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದರು.

