ಸೌದಿ ಅರೇಬಿಯಾದಿಂದ ಬಂದ ವ್ಯಕ್ತಿ ಬಂಧನ: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ

ಸೌದಿ ಅರೇಬಿಯಾದಿಂದ ಬಂದ ವ್ಯಕ್ತಿ ಬಂಧನ: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ

ಮಂಗಳೂರು: ವಿದೇಶದಲ್ಲಿ ನೆಲೆಸಿದ್ದ ವೇಳೆ ಹಿಂದೂ ಧರ್ಮದ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಆತ ಭಾರತಕ್ಕೆ ಆಗಮಿಸಿದ ತಕ್ಷಣ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಉಳಿಬೆಟ್ಟು ನಿವಾಸಿ ಅಬ್ದುಲ್ ಖಾದರ್ ನೆಹಾದ್ (27) ಎಂದು ಗುರುತಿಸಲಾಗಿದೆ. ಈತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರ ಪ್ರಕಾರ, ‘team_sdpi_2025’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಿಂದೂ ಧರ್ಮಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯವನ್ನು ಅಪ್‌ಲೋಡ್ ಮಾಡಲಾಗಿತ್ತು. ಈ ಕುರಿತು ಅಕ್ಟೋಬರ್ 11 ರಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿತ್ತು.ವಿದೇಶದಲ್ಲಿ ಪೋಸ್ಟ್ ಮಾಡಿ ದೇಶಕ್ಕೆ ಬಂದ ಕೂಡಲೇ ಆರೋಪಿಯನ್ನು ಬಂಧಿಸಲಾಗಿದೆ.

ಅಪರಾಧ ರಾಜ್ಯ