ಇಂದು ಮಂಡ್ಯಕ್ಕೆ ಆಗಮಿಸಲಿರುವ ರಾಷ್ಟ್ರಪತಿ: ಮಳವಳ್ಳಿಯಲ್ಲಿ ಸುತ್ತೂರು ಶ್ರೀಗಳ ಜಯಂತಿ ಮಹೋತ್ಸವದಲ್ಲಿ ಭಾಗಿ

ಇಂದು ಮಂಡ್ಯಕ್ಕೆ ಆಗಮಿಸಲಿರುವ ರಾಷ್ಟ್ರಪತಿ: ಮಳವಳ್ಳಿಯಲ್ಲಿ ಸುತ್ತೂರು ಶ್ರೀಗಳ ಜಯಂತಿ ಮಹೋತ್ಸವದಲ್ಲಿ ಭಾಗಿ

ಮಂಡ್ಯ: ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ತಮ್ಮ ದಕ್ಷಿಣ ಭಾರತದ ಪ್ರವಾಸದ ಅಂಗವಾಗಿ ಇಂದು (ಡಿಸೆಂಬರ್ 16) ಕರ್ನಾಟಕಕ್ಕೆ ಆಗಮಿಸಲಿದ್ದಾರೆ.ರಾಷ್ಟ್ರಪತಿ ಭವನದ ಹೇಳಿಕೆಯ ಪ್ರಕಾರ, ಡಿಸೆಂಬರ್ 16ರಿಂದ 22ರವರೆಗೆ ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳಿಗೆ ಅವರು ಭೇಟಿ ನೀಡಲಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮಿಗಳ 1066ನೇ ಜಯಂತಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.

ವರದಿಗಳ ಪ್ರಕಾರ, ರಾಷ್ಟ್ರಪತಿಯವರು ಮಧ್ಯಾಹ್ನ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮಳವಳ್ಳಿಗೆ ಪ್ರಯಾಣಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಮಂಡ್ಯ ಜಿಲ್ಲಾಡಳಿತವು ಎಲ್ಲಾ ಅಗತ್ಯ ಭದ್ರತಾ ಮತ್ತು ವ್ಯವಸ್ಥೆಗಳನ್ನು ಪೂರ್ಣಗೊಳಿಸಿದೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ರಾಷ್ಟ್ರಪತಿ ಮುರ್ಮು ಅವರು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ರಾತ್ರಿ ವಾಸ್ತವ್ಯ ಹೂಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ