ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ‘ಬಾಸ್ಟಿಯನ್’ ರೆಸ್ಟೋರೆಂಟ್ ಮೇಲೆ ನಿಯಮ ಉಲ್ಲಂಘನೆ ಆರೋಪ: ಪ್ರಕರಣ ದಾಖಲು

ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ‘ಬಾಸ್ಟಿಯನ್’ ರೆಸ್ಟೋರೆಂಟ್ ಮೇಲೆ ನಿಯಮ ಉಲ್ಲಂಘನೆ ಆರೋಪ: ಪ್ರಕರಣ ದಾಖಲು

ಬೆಂಗಳೂರು: ಸಿಲಿಕಾನ್ ಸಿಟಿಯ ನೈಟ್ ಲೈಫ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಸಹ-ಮಾಲೀಕತ್ವದ ಪ್ರತಿಷ್ಠಿತ ‘ಬಾಸ್ಟಿಯನ್’ ರೆಸ್ಟೋರೆಂಟ್ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಗರದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಈ ಹೈ-ಎಂಡ್ ರೆಸ್ಟೋರೆಂಟ್, ನಿಗದಿತ ಸಮಯ ಮೀರಿ ಕಾರ್ಯನಿರ್ವಹಿಸುತ್ತಿತ್ತು ಎಂಬ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 11 ರಂದು ತಡರಾತ್ರಿವರೆಗೂ ಇಲ್ಲಿ ಪಾರ್ಟಿ ಆಯೋಜಿಸುವ ಮೂಲಕ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಅರ್ ಘಟನೆಗೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ರೆಸ್ಟೋರೆಂಟ್ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ನಿಯಮಿತ ಸಮಯದ ನಂತರವೂ ವ್ಯವಹಾರ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಕಾನೂನು ಎಲ್ಲರಿಗೂ ಒಂದೇ,” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅಪರಾಧ ಮನೋರಂಜನೆ ರಾಜ್ಯ