ಬೆಂಗಳೂರು-ಗೋವಾ ನಡುವೆ ವಂದೇ ಭಾರತ್ ರೈಲು, ಕರಾವಳಿ ಮಾರ್ಗವಾಗಿ  ಆರಂಭಿಸಲು ಸಚಿವ ಹೆಚ್.ಡಿ.ಕೆ ಆಗ್ರಹ

ಬೆಂಗಳೂರು-ಗೋವಾ ನಡುವೆ ವಂದೇ ಭಾರತ್ ರೈಲು, ಕರಾವಳಿ ಮಾರ್ಗವಾಗಿ ಆರಂಭಿಸಲು ಸಚಿವ ಹೆಚ್.ಡಿ.ಕೆ ಆಗ್ರಹ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಪ್ರವಾಸಿಗರ ಸ್ವರ್ಗ ಗೋವಾ ನಡುವೆ ಕರಾವಳಿ ಕರ್ನಾಟಕದ ಮಾರ್ಗವಾಗಿ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಸೇವೆಯನ್ನು ಆರಂಭಿಸುವಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮಂಗಳವಾರ ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, ಕರ್ನಾಟಕದ ರಾಜಧಾನಿಯಿಂದ ಕರಾವಳಿ ಜಿಲ್ಲೆಗಳ ಮೂಲಕ ಮಡಗಾಂವ್‌ಗೆ ಹೈಸ್ಪೀಡ್ ರೈಲು ಸಂಪರ್ಕ ಕಲ್ಪಿಸುವುದು ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಬೆಂಗಳೂರಿನಿಂದ ಗೋವಾಕ್ಕೆ ಬೇರೆ ಮಾರ್ಗಗಳಲ್ಲಿ ರೈಲುಗಳಿದ್ದರೂ, ಕರಾವಳಿ ಕರ್ನಾಟಕದ ಸುಂದರ ಪ್ರಕೃತಿಯ ನಡುವೆ ಸಾಗುವ ಈ ಮಾರ್ಗದಲ್ಲಿ ವಂದೇ ಭಾರತ್ ಆರಂಭಿಸುವುದರಿಂದ ಪ್ರಯಾಣದ ಸಮಯ ಉಳಿತಾಯವಾಗುವುದಲ್ಲದೆ, ಜನರಿಗೆ ಅತ್ಯಾಧುನಿಕ ಸೌಲಭ್ಯದ ಪ್ರಯಾಣ ಲಭ್ಯವಾಗಲಿದೆ ಎಂದು ಕುಮಾರಸ್ವಾಮಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜಕೀಯ ರಾಜ್ಯ ರಾಷ್ಟ್ರೀಯ