ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ
ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ. ಕೆಎಎಸ್ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮಂತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ…










