ಪುತ್ತೂರು: ಐತಿಹಾಸಿಕ ಪ್ರಸಿದ್ಧ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಹೊರತರಲಾದ 2026ನೇ ಸಾಲಿನ ಹೊಸ ಕ್ಯಾಲೆಂಡರ್ ಅನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಅಧಿಕೃತವಾಗಿ ಬಿಡುಗಡೆಗೊಳಿಸಿದರು.
ದೇವಸ್ಥಾನದ ವತಿಯಿಂದ ಪ್ರತಿ ವರ್ಷ ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ಮಾಹಿತಿ ಹಾಗೂ ದೇವಳದ ಧಾರ್ಮಿಕ ಕಾರ್ಯಕ್ರಮಗಳ ವಿವರಗಳನ್ನು ಒಳಗೊಂಡ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುತ್ತಿದ್ದು, ಈ ಬಾರಿಯ ಕ್ಯಾಲೆಂಡರ್ ಅನ್ನು ಶಾಸಕರು ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರಭಟ್ ಅವರ ನೇತೃತ್ವದಲ್ಲಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು. ಸಮಿತಿಯ ಪ್ರಮುಖ ಸದಸ್ಯರಾದ ಈಶ್ವರ ನಾಯ್ಕ, ನಳಿನಿ ಪಿ ಶೆಟ್ಟಿ, ದಿನೇಶ್ ಕುಕಾಲ್ ಪಿ ವಿ, ಮಹಾಬಲ ರೈ ವಳತ್ತಡ್ಕ, ಸುಬಾಸ್ ರೈ ಬೆಳ್ಳಿಪ್ಪಾಡಿ ಹಾಗೂ ವಿನಯಕುಮಾರ್ ಬಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕ್ಯಾಲೆಂಡರ್ ಲೋಕಾರ್ಪಣೆಗೆ ಸಾಕ್ಷಿಯಾದರು.

