ಮಹಿಳಾ ಪ್ರೀಮಿಯರ್ ಲೀಗ್‌ನ ಮೂರನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಚಲನ ಮೂಡಿಸಿದೆ. ಶುಕ್ರವಾರ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ್ತಿ ನಡೀನ್ ಡಿ ಕ್ಲರ್ಕ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ನೆರವಿನಿಂದ ಆರ್ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ 3 ವಿಕೆಟ್‌ಗಳ ಐತಿಹಾಸಿಕ ಜಯ ದಾಖಲಿಸಿದೆ.

ಬೌಲಿಂಗ್‌ನಲ್ಲಿ ಮಿಂಚಿದ ನಡಿನ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ RCB ನಾಯಕಿ ಸ್ಮೃತಿ ಮಂಧಾನ ಅವರ ನಿರ್ಧಾರವನ್ನು ಬೌಲರ್‌ಗಳು ಸಮರ್ಥಿಸಿಕೊಂಡರು. ಅದರಲ್ಲೂ ನಡೀನ್ ಡಿ ಕ್ಲರ್ಕ್ ಕೇವಲ 26 ರನ್ ನೀಡಿ 4 ಪ್ರಮುಖ ವಿಕೆಟ್ ಪಡೆಯುವ ಮೂಲಕ ಮುಂಬೈ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಪರಿಣಾಮವಾಗಿ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಲಷ್ಟೇ ಶಕ್ತವಾಯಿತು.
ಅಂತಿಮ ಓವರ್‌ನ ರೋಚಕತೆ 155 ರನ್‌ಗಳ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ ಒಂದು ಹಂತದಲ್ಲಿ 137 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಕೊನೆಯ ಓವರ್‌ನಲ್ಲಿ ಗೆಲುವಿಗೆ 18 ರನ್‌ಗಳ ಅಗತ್ಯವಿತ್ತು. ಕ್ರೀಸ್‌ನಲ್ಲಿದ್ದ ನಡಿನ್ ಡಿ ಕ್ಲರ್ಕ್ ಅಸಾಧ್ಯವಾದುದನ್ನು ಸಾಧ್ಯವಾಗಿಸಿದರು.
ನಡೀನ್ ಡಿ ಕ್ಲರ್ಕ್ ಕೇವಲ 44 ಎಸೆತಗಳಲ್ಲಿ ಅಜೇಯ 63 ರನ್ (7 ಬೌಂಡರಿ, 2 ಸಿಕ್ಸರ್) ಸಿಡಿಸಿ ಪಂದ್ಯದ ಶ್ರೇಷ್ಠ ಆಟಗಾರ್ತಿಯಾಗಿ ಹೊರಹೊಮ್ಮಿದರು. ಈ ಗೆಲುವಿನೊಂದಿಗೆ RCB ಪಾಯಿಂಟ್ ಪಟ್ಟಿಯಲ್ಲಿ ಶುಭಾರಂಭ ಮಾಡಿದೆ.

