ಮೈಸೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆಸಿದ ಸಂಕ್ಷಿಪ್ತ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಪ್ರತ್ಯೇಕ ಮತ್ತು ಜಂಟಿ ಮಾತುಕತೆ ಪಕ್ಷದ ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರು ಮೊದಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ಜಂಟಿಯಾಗಿ ಮಾತನಾಡಿದರು. ಅದಾದ ನಂತರ, ಇಬ್ಬರೂ ನಾಯಕರೊಂದಿಗೆ ಪ್ರತ್ಯೇಕವಾಗಿಯೂ ಕೆಲ ನಿಮಿಷಗಳ ಕಾಲ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಸದ್ಯ ಸಿಎಂ ಬದಲಾವಣೆ ಮತ್ತು ಅಧಿಕಾರ ಹಂಚಿಕೆಯ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಸಮಯದಲ್ಲಿ ಈ ಭೇಟಿ ನಡೆದಿರುವುದು ರಾಜಕೀಯ ವಲಯದಲ್ಲಿ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಕೇವಲ ಹತ್ತು-ಹದಿನೈದು ನಿಮಿಷಗಳ ಈ ಭೇಟಿಯು ಮುಂಬರುವ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಯಾವ ರೀತಿಯ ಬದಲಾವಣೆಗಳಿಗೆ ಮುನ್ನುಡಿ ಬರೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

