ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ರದ್ದು: ರಾಜ್ಯ ಸರ್ಕಾರದ ನಿಷೇಧ ತೆರವುಗೊಳಿಸಿದ ಹೈಕೋರ್ಟ್

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ರದ್ದು: ರಾಜ್ಯ ಸರ್ಕಾರದ ನಿಷೇಧ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದ ಬೈಕ್ ಟ್ಯಾಕ್ಸಿ ಸವಾರರಿಗೆ ಹಾಗೂ ಈ ಸೇವೆಯನ್ನೇ ನಂಬಿಕೊಂಡಿದ್ದ ಜನಸಾಮಾನ್ಯರಿಗೆ ಹೈಕೋರ್ಟ್ ಮಹತ್ವದ ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲಿದ್ದ ನಿಷೇಧವನ್ನು ರದ್ದುಗೊಳಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ತಕ್ಷಣವೇ ಸೇವೆ ಆರಂಭಿಸಲು ಹಸಿರು ನಿಶಾನೆ ತೋರಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಷಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ಪ್ರಕಟಿಸಿದೆ. ಬೈಕ್ ಟ್ಯಾಕ್ಸಿಗಳನ್ನು ‘ಸಾರಿಗೆ ವಾಹನ’ಗಳಾಗಿ ನೋಂದಾಯಿಸಲು ಮತ್ತು ಅವುಗಳಿಗೆ ಅಗತ್ಯ ‘ಕ್ಯಾರೇಜ್ ಪರ್ಮಿಟ್’ ನೀಡಲು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ ಏನು?​ ಈ ಹಿಂದೆ ಕರ್ನಾಟಕ ಸರ್ಕಾರವು ಬೈಕ್ ಟ್ಯಾಕ್ಸಿ ಸೇವೆಗಳನ್ನು ಅಕ್ರಮ ಎಂದು ಘೋಷಿಸಿ ನಿಷೇಧ ಹೇರಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಪ್ರಮುಖ ಅಗ್ರಿಗೇಟರ್ ಕಂಪನಿಗಳಾದ ಓಲಾ, ಉಬರ್ ಮತ್ತು ರ್ಯಾಪಿಡೋ ಹೈಕೋರ್ಟ್ ಮೆಟ್ಟಿಲೇರಿದ್ದವು. ಸುದೀರ್ಘ ವಿಚಾರಣೆಯ ನಂತರ, ಬೈಕ್ ಟ್ಯಾಕ್ಸಿಗಳ ಪರವಾಗಿ ನ್ಯಾಯಾಲಯ ತೀರ್ಪು ನೀಡಿದೆ.

​ಈ ತೀರ್ಪಿನಿಂದಾಗಿ ಕಳೆದ ಹಲವು ಸಮಯದಿಂದ ಉದ್ಯೋಗ ಕಳೆದುಕೊಂಡಿದ್ದ ಸಾವಿರಾರು ಬೈಕ್ ಟ್ಯಾಕ್ಸಿ ಚಾಲಕರಿಗೆ ಮತ್ತೆ ಬದುಕು ಕಂಡುಕೊಳ್ಳುವ ಭರವಸೆ ಮೂಡಿದೆ.

ಉದ್ಯೋಗ ರಾಜ್ಯ ವಾಹನ ಸುದ್ದಿ