ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ‘ಕನ್ಫಿಡೆಂಟ್ ಗ್ರೂಪ್’ ಸಂಸ್ಥಾಪಕ ಮತ್ತು ಅಧ್ಯಕ್ಷ ಸಿ.ಜೆ. ರಾಯ್ ಅವರು ಶುಕ್ರವಾರ ನಗರದ ತಮ್ಮ ಕಚೇರಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಗರದ ರಿಚ್‌ಮಂಡ್ ಸರ್ಕಲ್ ಬಳಿ ಇರುವ ಅವರ ಕಚೇರಿಯಲ್ಲಿ ಈ ಘಟನೆ ನಡೆದಿದೆ. ರಾಯ್ ಅವರು ತಮ್ಮ ಪರವಾನಗಿ ಹೊಂದಿದ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

