ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರಕ್ಕೆ ಬ್ರೇಕ್ ಹಾಕಿದ ಬಿಎಂಆರ್‌ಸಿಎಲ್

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರಕ್ಕೆ ಬ್ರೇಕ್ ಹಾಕಿದ ಬಿಎಂಆರ್‌ಸಿಎಲ್

ಬೆಂಗಳೂರು: ರಾಜಧಾನಿಯ ಮೆಟ್ರೋ ಪ್ರಯಾಣಿಕರಿಗೆ ನಿರಂತರವಾಗಿ ಕಾಡುತ್ತಿದ್ದ ದರ ಏರಿಕೆಯ ಭೀತಿ ಸದ್ಯಕ್ಕೆ ದೂರವಾಗಿದೆ. ಫೆಬ್ರವರಿ 9ರಿಂದ ಜಾರಿಗೆ ಬರಬೇಕಿದ್ದ ಮೆಟ್ರೋ ಟಿಕೆಟ್ ದರ ಪರಿಷ್ಕರಣೆಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತಾತ್ಕಾಲಿಕವಾಗಿ ಮುಂದೂಡಿದೆ.

ಕಳೆದ ವಾರ ಬಿಎಂಆರ್‌ಸಿಎಲ್ ಪ್ರತಿ ಹಂತದ ದರದಲ್ಲಿ 1 ರಿಂದ 5 ರೂಪಾಯಿವರೆಗೆ ಏರಿಕೆ ಮಾಡುವುದಾಗಿ ಘೋಷಿಸಿತ್ತು. ಇದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಜೆಪಿಯ ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಈ ನಿರ್ಧಾರವನ್ನು ಖಂಡಿಸಿ, ಕೇಂದ್ರ ಸಚಿವರ ಗಮನಕ್ಕೆ ತಂದಿದ್ದರು. ರಾಜ್ಯ ಸರ್ಕಾರವು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು.

ಬಿಎಂಆರ್‌ಸಿಎಲ್ ಹೇಳಿಕೆ:

​”ಫೆಬ್ರವರಿ 5 ರಂದು ಹೊರಡಿಸಲಾಗಿದ್ದ ದರ ಪರಿಷ್ಕರಣೆಯ ಮಾಧ್ಯಮ ಪ್ರಕಟಣೆಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ಮಂಡಳಿಯ (Board) ಮುಂದಿನ ಪರಿಶೀಲನೆಯ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು,” ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

Uncategorized