ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಮಂಗಳವಾರ ಮಹತ್ವದ ಅನುಮೋದನೆ ನೀಡಿದೆ.

ನೂತನ ಪ್ರಧಾನ ಮಂತ್ರಿ ಕಾರ್ಯಾಲಯದ ಸಂಕೀರ್ಣವಾದ ‘ಸೇವಾ ತೀರ್ಥ’ದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
“ಕೇರಳ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟವು ಅಂಕಿತ ಹಾಕಿದೆ.”
— ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ
ಕೇರಳ ವಿಧಾನಸಭೆಯು ಈ ಹಿಂದೆ ಸರ್ವಾನುಮತದಿಂದ ರಾಜ್ಯದ ಹೆಸರನ್ನು ಬದಲಾಯಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿ ನಿರ್ಣಯ ಅಂಗೀಕರಿಸಿತ್ತು. ಈಗ ಕೇಂದ್ರದ ಅನುಮೋದನೆಯೊಂದಿಗೆ ಅಧಿಕೃತವಾಗಿ ಹೆಸರು ಬದಲಾವಣೆಯ ಪ್ರಕ್ರಿಯೆಗಳು ಚಾಲನೆ ಪಡೆಯಲಿವೆ.

