T20 World Cup: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ – ಗೆದ್ದರೂ ಬೌಲಿಂಗ್ ಬಗ್ಗೆ ಸೂರ್ಯಕುಮಾರ್ ಅಸಮಾಧಾನ!

T20 World Cup: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ – ಗೆದ್ದರೂ ಬೌಲಿಂಗ್ ಬಗ್ಗೆ ಸೂರ್ಯಕುಮಾರ್ ಅಸಮಾಧಾನ!

ಚೆನ್ನೈ: ಟಿ20 ವಿಶ್ವಕಪ್‌ನ ಮಹತ್ವದ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಸೆಮಿಫೈನಲ್ ರೇಸ್‌ನಲ್ಲಿ ಜೀವಂತವಾಗಿದ್ದರೂ, ತಂಡದ ಬೌಲಿಂಗ್ ಪ್ರದರ್ಶನದ ಬಗ್ಗೆ ನಾಯಕ ಸೂರ್ಯಕುಮಾರ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಬ್ಯಾಟರ್‌ಗಳ ಅಬ್ಬರದಿಂದ 4 ವಿಕೆಟ್ ನಷ್ಟಕ್ಕೆ 256 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನ ನಂತರ ಚೇತರಿಸಿಕೊಂಡ ಭಾರತದ ಬ್ಯಾಟಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡಿತು.

ಬೃಹತ್ ಗುರಿ ಬೆನ್ನಟ್ಟಿದ ಜಿಂಬಾಬ್ವೆ ತಂಡ ಭಾರತಕ್ಕೆ ಸವಾಲಾಗದಿದ್ದರೂ, ನಿಗದಿತ ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 184 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ತಂಡವು ಸುಲಭವಾಗಿ ಗೆದ್ದರೂ, ಬೌಲಿಂಗ್ ವಿಭಾಗದಲ್ಲಿ ಇನ್ನು ಹೆಚ್ಚಿನ ಶಿಸ್ತು ಅಗತ್ಯವಿದೆ ಎಂಬುದು ಕ್ಯಾಪ್ಟನ್ ಸೂರ್ಯ ಅಭಿಪ್ರಾಯ.

​”ನಾವು ಬ್ಯಾಟಿಂಗ್‌ನಲ್ಲಿ ಅದ್ಭುತವಾಗಿ ಆಡಿದ್ದೇವೆ, ಆದರೆ ಬೌಲಿಂಗ್‌ನಲ್ಲಿ ನಾವು ಇನ್ನೂ ಸ್ಮಾರ್ಟ್ ಆಗಿರಬೇಕಿತ್ತು. ಗೆಲುವು ಮುಖ್ಯವಾದರೂ, ಮುಂಬರುವ ಪಂದ್ಯಗಳಲ್ಲಿ ಸಣ್ಣ ತಪ್ಪುಗಳೂ ನಮಗೆ ಹೊರೆಯಾಗಬಹುದು,” ಎಂದು ಪಂದ್ಯದ ನಂತರ ಸೂರ್ಯಕುಮಾರ್ ಯಾದವ್ ತಿಳಿಸಿದರು.

ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ