​ಮಂಗಳೂರು: ಬಸ್ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ; ಹಲವು ಮಂದಿಗೆ ಗಾಯ!

​ಮಂಗಳೂರು: ಬಸ್ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ; ಹಲವು ಮಂದಿಗೆ ಗಾಯ!

ಮಂಗಳೂರು: ನಗರದ ಹೊರವಲಯದ ಗುರುಪುರ – ಕೈಕಂಬ ಮೀಪದ ಭಾಮಿ ಶಾಲೆಯ ಬಳಿ ಬುಧವಾರ ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ.
ಘಟನೆಯ ವಿವರ:
ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಬಸ್ ಮತ್ತು ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಈ ಅಪಘಾತ ನಡೆದಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಪೊಲೀಸರ ಭೇಟಿ:
ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಮಂಗಳೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪಘಾತ ಪ್ರಾದೇಶಿಕ ರಾಜ್ಯ