ಡಿಕೆ ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ

ಡಿಕೆ ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ

​ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಭಾನುವಾರ ನಡೆದ ಸಮೂಹ ವಿವಾಹ ಕಾರ್ಯಕ್ರಮವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.​

ಈ ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಗ್ನಿ ಅವಘಡ ಸಂಭವಿಸುವ ಕೆಲ ಸಮಯದ ಮೊದಲಷ್ಟೇ ಭಾಗವಹಿಸಿ ತೆರಳಿದ್ದರು ಎನ್ನಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ವೇಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರುಎಣಿಕೆ ವಿಷಯವಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್, ಇದೊಂದು “ಪ್ರಜಾಪ್ರಭುತ್ವದ ವಿರುದ್ಧ ನಡೆದ ಸಂಘಟಿತ ಅಪರಾಧ” ಎಂದು ಕಿಡಿಕಾರಿದ್ದಾರೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಗೆಲುವನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ನ್ಯಾಯಾಲಯದ ಮೆಟ್ಟಿಲೇರಿದ್ದರು.​

ಆದರೆ, ಹೈಕೋರ್ಟ್ ಆದೇಶದಂತೆ ನಡೆದ ಮರುಎಣಿಕೆಯಲ್ಲಿ ರಾಜೇಗೌಡ ಅವರ ಗೆಲುವಿನ ಅಂತರ 201 ರಿಂದ 203ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, “ನಮ್ಮ ಅಭ್ಯರ್ಥಿಯ ಮತಗಳನ್ನು ಅಸಿಂಧುಗೊಳಿಸಲು ಪಿತೂರಿ ನಡೆಸಲಾಗಿತ್ತು, ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು” ಎಂದು ಒತ್ತಾಯಿಸಿದರು.

ಅಪಘಾತ ರಾಜ್ಯ