ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿರುವು ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ, ಜುಲೈ 18ರ ಗುರುವಾರದಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮ ಕೈಗೊಂಡಿದೆ.

ಯಾವೆಲ್ಲಾ ಸಂಸ್ಥೆಗಳಿಗೆ ರಜೆ ಅನ್ವಯ? ಜಿಲ್ಲಾಧಿಕಾರಿಗಳ ಅಧಿಕೃತ ಪ್ರಕಟಣೆಯ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ:ಎಲ್ಲಾ ಅಂಗನವಾಡಿ ಕೇಂದ್ರಗಳು.ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು.ವಸತಿ ಶಾಲೆಗಳು.ಪದವಿ ಪೂರ್ವ (PUC – 12ನೇ ತರಗತಿಯವರೆಗೆ) ಮತ್ತು ಪದವಿ ಪೂರ್ವ ವಸತಿ ಕಾಲೇಜುಗಳು.
ಈ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51(ಬಿ) ರ ಅನ್ವಯ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

