ಪ್ರಶ್ನೆಪತ್ರಿಕೆ ಸೋರಿಕೆ ಮಾಫಿಯಾವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ತಿದ್ದುಪಡಿ ಮಸೂದೆಗೆ ಸಂಸತ್ತಿನ ಒಪ್ಪಿಗೆ, ಕೊಟ್ಟ ಮಾತು ಈಡೇರಿಸಿದ್ದೇವೆಂದ ಪ್ರಧಾನಿ ಮೋದಿ

ಪ್ರಶ್ನೆಪತ್ರಿಕೆ ಸೋರಿಕೆ ಮಾಫಿಯಾವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ತಿದ್ದುಪಡಿ ಮಸೂದೆಗೆ ಸಂಸತ್ತಿನ ಒಪ್ಪಿಗೆ, ಕೊಟ್ಟ ಮಾತು ಈಡೇರಿಸಿದ್ದೇವೆಂದ ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ – 2026’ ಗೆ ಸಂಸತ್ತಿನ ಎರಡೂ ಸದನಗಳು ಅನುಮೋದನೆ ನೀಡಿವೆ.

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರಗೊಂಡ ಬಳಿಕ ವಿಡಿಯೋ ಸಂದೇಶ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, “ಪ್ರಶ್ನೆಪತ್ರಿಕೆ ಲೀಕ್ ಮಾಡಿ ಯುವಜನತೆಯ ಭವಿಷ್ಯದ ಜೊತೆ ಚೆಲ್ಲಾಟವಾಡುವ ಮಾಫಿಯಾವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಸಂಸತ್ತಿನಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಹೊಸ ಕಾಯ್ದೆಯಡಿ ಪರೀಕ್ಷಾ ಅಕ್ರಮ ಎಸಗುವ ಮಾಫಿಯಾಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 10 ಕೋಟಿ ರೂ. ವರೆಗೆ ದಂಡ ವಿಧಿಸಲು ಕಟ್ಟುನಿಟ್ಟಿನ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಪ್ರಕರಣಗಳ ಶೀಘ್ರ ವಿಚಾರಣೆಗೆ ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತದೆ.

ರಾಷ್ಟ್ರೀಯ ಶೈಕ್ಷಣಿಕ