ಬೆಂಗಳೂರು/ಮಂಗಳೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವ್ಯಾಪ್ತಿಗೆ ಒಳಪಡುವ ಸಿರಿಬಾಗಿಲು ಎಡಕುಮೇರಿ ರೈಲ್ವೆ ನಿಲ್ದಾಣಗಳ ನಡುವೆ ಟ್ರ್ಯಾಕ್ ನಿರ್ವಹಣೆ (Track Maintenance) ಮತ್ತು ಎಂಜಿನಿಯರಿಂಗ್ ಕಾಮಗಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಹಲವು ಪ್ರಮುಖ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಕರಾವಳಿ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಯೋಜಿಸುವ ಮುನ್ನ ರದ್ದಾಗಿರುವ ರೈಲುಗಳ ದಿನಾಂಕಗಳನ್ನು ಪರಿಶೀಲಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.


ಪ್ರಯಾಣಿಕರ ಗಮನಕ್ಕೆ:ರೈಲು ಸಂಚಾರದಲ್ಲಿನ ಈ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರು ತಮ್ಮ ಪ್ರಯಾಣದ ವೇಳಾಪಟ್ಟಿಯನ್ನು ಕಾಯ್ದಿರಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ www.swr.indianrailways.gov.in ಗೆ ಭೇಟಿ ನೀಡಬಹುದು.

