ನಾಗರ ಪಂಚಮಿ ಹಿನ್ನೆಲೆ: ಆಗಸ್ಟ್ 17 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಹಿನ್ನೆಲೆ: ಆಗಸ್ಟ್ 17 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ಮಂಗಳೂರು: ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಹೊಂದಿರುವ ನಾಗರ ಪಂಚಮಿ ಹಬ್ಬದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಗಸ್ಟ್ 17ರ ಸೋಮವಾರದಂದು ಜಿಲ್ಲಾಡಳಿತವು ಸಾರ್ವಜನಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿಗಳ ಕಚೇರಿಯಿಂದ ಬಿಡುಗಡೆಯಾದ ಅಧಿಕೃತ ಪ್ರಕಟಣೆಯ ಪ್ರಕಾರ, ಆಗಸ್ಟ್ 17ರಂದು ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳು ಮುಚ್ಚಿರಲಿವೆ. ಕರಾವಳಿ ಭಾಗದಲ್ಲಿ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಗುವ ನಾಗರ ಪಂಚಮಿ ಹಬ್ಬಕ್ಕೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪ್ರಾದೇಶಿಕ ರಾಜ್ಯ