ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಭೇಟಿ: ಮಹಿಳಾ ಪ್ರಯಾಣಿಕರೊಡನೆ ಮಾತುಕತೆ.

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಭೇಟಿ: ಮಹಿಳಾ ಪ್ರಯಾಣಿಕರೊಡನೆ ಮಾತುಕತೆ.

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಗೆ ಇಂದು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿದರು. ಸರ್ಕಾರದ ಶಕ್ತಿ ಯೋಜನೆ ಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ನಂತರ ಮಹಿಳಾ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿ, ಮಹಿಳಾ ವಿಶ್ರಾಂತಿ ಕೊಠಡಿ ಮತ್ತು ಶಿಶು ಆರೈಕೆ ಕೊಠಡಿ ತೆರಳಿ ಪರಿಶೀಲನೆ ನಡೆಸಿದರು. ಬಸ್ ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರಿಗೆ ಮತ್ತು ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆಗಾಲದಲ್ಲಿ ಪರಿಸರವನ್ನು ಸ್ವಚ್ಛವಾಗಿಡಬೇಕು ತಿಳಿಸಿದರು. ನಂತರ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಮೂಲಭೂತ ಸೌಕರ್ಯಗಳ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಹರೀಶ್ ಕಂಜಿಪಿಲಿ, ಎಸ್. ಎನ್ ಮನ್ಮಥ, ಎ. ವಿ ತೀರ್ಥರಾಮ, ಎನ್. ಎ ರಾಮಚಂದ್ರ,ಸುಬೋದು ರೈ, ರಾಕೇಶ್ ಕೇಡೆಂಜಿ,ಸುಪ್ರೀತ್ ಮೋOಟಡ್ಕ, ಚನಿಯ ಕಲ್ತಡ್ಕ, ಮಹೇಶ್ ಮೇನಾಲ, ಶೀಲಾ ಅರುಣಾ ಕುರುಂಜಿ, ಚಂದ್ರಶೇಖರ ನೆಡಿಲು, ಸುಧಾಕರ, ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯ