
ಮಾಣಿ ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಸುಳ್ಯದ ಅರಂಬೂರು ಪರಿವಾರಕಾನದಲ್ಲಿ ಜೀಪೊಂದು ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಜೂನ್ 17 ರಂದು ನಡೆದಿದೆ, ಸುಳ್ಯದಿಂದ ಸಂಪಾಜೆ ಕಡೆಗೆ ತೆರಳುತ್ತಿದ್ದ ಕೆ ವಿ ಜಿ ಡೆಂಟಲ್ ಕಾಲೇಜು ವಿದ್ಯಾರ್ಥಿಗಳಿಬ್ಬರು ಚಲಾಯಿಸುತ್ತಿದ್ದ ಬೈಕ್ ಗೆ ಪೆರಾಜೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಮಹಾವಿಷ್ಣು ಜೀಪು ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ, ಘಟನೆಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಕೂಡಲೆ ಜೀಪು ಚಾಲಕ ರಂಜಿತ್ ಹಾಗೂ ಸ್ಥಳೀಯರು ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು , ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ತೇಜಸ್ವಿನಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.


