
ಪುತ್ತೂರು: ನಗರದ ಹೊರವಲಯದ ಕಲ್ಲರ್ಪೆಯಲ್ಲಿ
ಮುಂಜಾನೆ 7ಗಂಟೆ ಸುಮಾರಿಗೆ ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ
ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟರ್ ನಜ್ಗುಗುಜ್ಜಾಗಿದೆ.ಅಪಘಾತಕ್ಕೊಳಗಾದ ಮಡಿಕೇರಿ ನೊಂದಾಯಿತ ಕಾರಿನಲ್ಲಿದ್ದವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

