ದೇವರಕೊಲ್ಲಿಯಲ್ಲಿ ಕಂಟೈನರ್ ಲಾರಿ ಮತ್ತು ಕಾರು ನಡುವೆ ಅಪಘಾತ: ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ಇಬ್ಬರು ಗಂಭೀರ ಗಾಯ.

ದೇವರಕೊಲ್ಲಿಯಲ್ಲಿ ಕಂಟೈನರ್ ಲಾರಿ ಮತ್ತು ಕಾರು ನಡುವೆ ಅಪಘಾತ: ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ಇಬ್ಬರು ಗಂಭೀರ ಗಾಯ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ದೇವರ ಕೊಲ್ಲಿ ತಿರುವಿನಲ್ಲಿ ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದೆ ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕಂಟೈನರ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಕಾರು ಸಂಪಾಜೆ ಮೂಲಕ ಮಡಿಕೇರಿಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ. ಗಾಯಾಳುಗಳು ಮೈಸೂರು ಮೂಲದವರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ವಿವರ ಇನ್ನಷ್ಟೆ ತಿಳಿದು ಬರಬೇಕಿದೆ.

ರಾಜ್ಯ