ಸೋಮವಾರಪೇಟೆ ಬಸ್, ಕಾರು ಡಿಕ್ಕಿ : ಹಿರಿಕರ ಗ್ರಾಮದ ದಂಪತಿ ಸಾವು.

ಸೋಮವಾರಪೇಟೆ ಬಸ್, ಕಾರು ಡಿಕ್ಕಿ : ಹಿರಿಕರ ಗ್ರಾಮದ ದಂಪತಿ ಸಾವು.

ಮಡಿಕೇರಿ ಜು.1 : ಭೀಕರ ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ನಡೆದಿದೆ. ಕೆಎಸ್‌ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಮೈಸೂರು ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದ ನಿವೃತ್ತ ಪ್ರಾಂಶುಪಾಲ ಹಿರಿಕರ ಗ್ರಾಮದ ಹೆಚ್.ಬಿ.ಬೆಳ್ಳಿಯಪ್ಪ
ನಿವಾಸಿ (66)ಸ್ಥಳದಲ್ಲೇ ಮೃತಪಟ್ಟರು. ಬೆಳ್ಳಿಯಪ್ಪ
ಅವರ ಪತ್ನಿ ವೀಣಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಸಾವನ್ನಪ್ಪಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು,‌ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ