
ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ,
ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ
(73) ನಿಧನರಾಗಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ
ಇಂದು(ಜುಲೈ 18) ಬೆಂಗಳೂರಿನ ಖಾಸಗಿ
ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ
ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ
ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ
ವಿಜಯನ್ ಟ್ವಿಟ್ ಮೂಲಕ ಸಂತಾಪ
ಸೂಚಿಸಿದ್ದಾರೆ.
ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್
31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ
ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ
ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು
ಪೂರ್ಣಗೊಳಿಸಿ ಬಳಿಕ ಕೊಟ್ಟಾಯಂನ
ಸಿಎಮ್‌ಎಸ್ ಕಾಲೇಜು ಮತ್ತು ಚಂಗನಾಸ್ಪೆರಿಯ
ಸೇಂಟ್ ಬರ್ಚನ್ಸ್ ಕಾಲೇಜಿನಲ್ಲಿ ವ್ಯಾಸಂಗ
ಮಾಡಿದ್ದರು. ಎರ್ನಾಕುಲಂನ ಸರ್ಕಾರಿ ಕಾನೂನು
ಕಾಲೇಜಿನಿಂದ ಎಲ್‌ಎಲ್ಸಿ ಪದವಿ ಪೂರೈಸಿದ್ದರು.ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ
ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967
ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ
ರಾಜ್ಯಾಧ್ಯಕ್ಷರಾದ್ದರು. ಹೀಗೆ ವಿದ್ಯಾರ್ಥಿ ಜೀವನದಲ್ಲಿ
ರಾಜಕೀಯದತ್ತ ಆಕರ್ಷಿತರಾದ ಉಮ್ಮನ್ ಚಾಂಡಿ
ಅವರು ಕಾಂಗ್ರೆಸ್ ಮೂಲಕ ತಮ್ಮ ರಾಜಕೀಯ
ಜೀವನ ಆರಂಭಿಸಿದ್ದ ಉಮ್ಮನ್ ಚಾಂಡಿ 1969
ರಲ್ಲಿ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ್ದರು.

