ಮಂಗಳೂರು: ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು.

ಮಂಗಳೂರು: ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು.

ಮಂಗಳೂರು: ನಗರದ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಮೂಲತಃ ಅಡ್ಯಾರ್, ಪ್ರಸ್ತುತ ಕದ್ರಿ ಶಿವಭಾಗ್ ನಿವಾಸಿ ಸಮಯ್ (21) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ರವಿವಾರ ಬೆಳಗ್ಗೆ ಶಿವಭಾಗ್ ಅಪಾರ್ಟ್‌ಮೆಂಟ್‌ನ ತಮ್ಮ ಫ್ಲ್ಯಾಟ್‌ನ ಬಾಲ್ಕನಿಯಲ್ಲಿ ಸಮಯ್ ಅವರು ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಹೋಗಿದ್ದಾರೆ. ಈ ವೇಳೆ ಸಮಯ್ ಅವರು ಬಾತ್‌ರೂಂಗೆ ಹೋಗಿ ಬಂದು, ಬಳಿಕ ನೆಲಮಹಡಿಯ ಪಾರ್ಕಿಂಗ್ ಜಾಗದಲ್ಲಿರುವ ತನ್ನ ತಾಯಿ ಬಳಿ ಕಾರು ತೊಳೆಯಲು ಬಾಲ್ದಿ ಕೊಂಡು ಹೋಗಿದ್ದೀರಾ ಎಂದು ಬಾಲ್ಕನಿಯಿಂದ ಕೇಳಿದ್ದಾರೆ. ಈ ಸಂದರ್ಭ ಮಳೆ ನೀರಿನ ಹನಿಯಿಂದ ಜಾರಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.

ಸಮಯ್ ಅವರ ತಂದೆ ಸಿವಿಲ್ ಇಂಜಿನಿಯರ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ಈ ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್ ಹಿರಿಯವರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ರಾಜ್ಯ