
ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡಿದ್ದಕ್ಕೆ ಚಾಲಕನಿಗೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಳಿ ಬುಧವಾರ ರಾತ್ರಿ ನಡೆದಿದೆ.
ಉಜಿರೆ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ ಯುವಕ. ಈತ ಉಜಿರೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಬೆಂಗಳೂರಿಗೆ ತೆರಳಲೆಂದು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡ ನಿನಗೆ ಹಿಂದೂ ಯುವತಿಯರೆ ಬೇಕಾ ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ.
ಸಧ್ಯ ಯುವಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

