ನಟ ವಿಜಯ್ ರಾಘವೇಂದ್ರ ಪತ್ನಿ :ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಕ್ಷಿತ್ ಶಿವರಾಂ ಅವರ ಸಹೋದರಿ : ಸ್ಪಂದನಾ ನಿಧನ ಫ್ಯಾಮಿಲಿ ಟೂರ್ ಗೆ ತೆರಳಿದ್ದ ವೇಳೆ ದುರ್ಮರಣ.

ನಟ ವಿಜಯ್ ರಾಘವೇಂದ್ರ ಪತ್ನಿ :ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಕ್ಷಿತ್ ಶಿವರಾಂ ಅವರ ಸಹೋದರಿ : ಸ್ಪಂದನಾ ನಿಧನ ಫ್ಯಾಮಿಲಿ ಟೂರ್ ಗೆ ತೆರಳಿದ್ದ ವೇಳೆ ದುರ್ಮರಣ.

ಸ್ಯಾಂಡಲ್ ವುಡ್ ನ ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಪ್ರವಾಸಕ್ಕೆಂದು ಫ್ಯಾಮಿಲಿ ಜೊತೆ ಥೈಲ್ಯಾಂಡ್ ಗೆ ತೆರಳಿದ್ದ ವೇಳೆ ಈ ಅವಘಢ ಸಂಭವಿಸಿದೆ. ಹಠಾತ್ ಅಸೌಖ್ಯಕ್ಕೀಡಾದ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹೃದಯಾಘಾತವಾದ ಕಾರಣ ಸ್ಪಂದನಾ ಉಸಿರು ಚೆಲ್ಲಿದ್ದಾರೆ. ಗೆಳತಿಯರ ಜೊತೆ ವಿದೇಶ ಪ್ರವಾಸಕ್ಕೆ ತೆರಳಿರುವ ಸ್ಪಂದನಾಗೆ ಏಕಾಏಕಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಲೋ ಬಿಪಿಯಿಂದ ಹೃದಯಾಘಾತ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007 ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ಇನ್ನೇನು ಕೆಲವೇ ದಿನಗಳಲ್ಲಿ ಇವರ 16ನೇ ವಿವಾಹ ವಾರ್ಷಿಕೋತ್ಸವವಿತ್ತು.


2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಸ್ಪಂದನಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರು ಕಳೆದ ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಕ್ಷಿತ್ ಶಿವರಾಂ ಅವರ ಸಹೋದರಿ. ವಿಷಯ ತಿಳಿಯುತ್ತಿದ್ದಂತೆ ವಿಜಯರಾಘವೇಂದ್ರ ಕುಟುಂಬದವರು ಬ್ಯಾಂಕಾಕ್ ಗೆ ತೆರಳಿದ್ದಾರೆ.

ರಾಜ್ಯ