77ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ.. ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

77ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ.. ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ಮೋದಿಯವರು 10ನೇ ಬಾರಿಗೆ ಧ್ವಜಾರೋಹಣ ಮಾಡಿರುವುದು ಮತ್ತೊಂದು ವಿಶೇಷ ಎನಿಸಿತು. ಬಳಿಕ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯವರು ಭಾಷಣ ಮಾಡಿದರು.

ದೇಶದ ಮಹಿಳೆಯರಿಗೆ ಶಕ್ತಿ ತುಂಬಿದರು. ಇಂದಿನ ಆಧುನಿಕ ವಿಜ್ಞಾನ, ತಂತ್ರಜ್ಞಾನದಲ್ಲಿ ಮಹಿಳೆಯರು ಹೆಚ್ಚು ಪಾಲ್ಗೊಳ್ಳಬೇಕು. ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಮುನ್ನುಗ್ಗಬೇಕಿದೆ. ಇನ್ನಷ್ಟು ಮಹಿಳೆಯರು ತಂತ್ರಜ್ಞಾನದತ್ತ ಬರಲಿ, ಇದರಿಂದ ದೇಶ ಪ್ರಗತಿ ಕಡೆ ಸಾಗುತ್ತದೆ. ಈಗಾಗಲೇ ಬೇರೆ ದೇಶಕ್ಕಿಂತ ಭಾರತದಲ್ಲಿ ಹೆಚ್ಚು ಮಹಿಳಾ ಪೈಲಟ್​ಗಳನ್ನು ಹೊಂದಿದೆ. ಇದು ಭಾರತ ಆಧುನಿಕತೆಯತ್ತ ಹೆಜ್ಜೆ ಇಡುತ್ತಿರುವುದು ತೋರಿಸುತ್ತಿದೆ ಎಂದು ಹೇಳಿದರು.

ಟೆಕ್ನಾಲಾಜಿ, ವಿಜ್ಞಾನ, ವೈದ್ಯಕೀಯ, ಇಂಜಿನಿಯರಿಂಗ್​​ ವಿಭಾಗಗಳಲ್ಲಿ ಹೆಚ್ಚಾಗಿ ಯುವತಿಯರು ಉತ್ಸಾಹದಿಂದ ಸೇರಿಕೊಂಡು ಕಲಿಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಡ್ರೋನ್​ ಬಳಕೆ ಬಗ್ಗೆ ಮಹಿಳಾ ಸ್ವಸಹಾಯ ಸಂಘಗಳಿಗೆ ತರಬೇತಿ ನೀಡಲಾಗುವುದು. ಜನ ಪರ ಕಲ್ಯಾಣಕ್ಕೆ ಹೆಚ್ಚು ಹಣ ವ್ಯಯ ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯ