
ಮಡಿಕೇರಿ ಸೆ.3 : ವಿದ್ಯುತ್ ಕಂಬ ಮತ್ತು ತಡೆಗೋಡೆಗೆ ಕಾರು ಡಿಕ್ಕಿಯಾದ ಪರಿಣಾಮ ಪ್ರಸಿದ್ದ ಮೆಕಾನಿಕ್ ಒಬ್ಬರು ಮೃತಪಟ್ಟಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ.


ನಗರದ ನಿವಾಸಿ ಭಾಸ್ಕರ್(67) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಈದ್ಗಾ ಮೈದಾನದ ಬಳಿಯ ರಸ್ತೆಯಲ್ಲಿ ಪಾದಾಚಾರಿಗಳಿಗೆ ಕಾರು ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಸ್ವತ: ಕಾರು ಚಲಾಯಿಸುತ್ತಿದ್ದ ಭಾಸ್ಕರ್ ಅವರು ತೀವ್ರವಾಗಿ ಗಾಯಗೊಂಡು ಸಾವನ್ನಪಿದರು. ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಸುಂಟಿಕೊಪ್ಪದ ರವಿ ಪೂಜಾರಿ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಗೊಂಡಿದ್ದಾರೆ
