ಕಡಬ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಪ್ರಕರಣ: ಓರ್ವನ ಬಂಧನ.

ಕಡಬ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಪ್ರಕರಣ: ಓರ್ವನ ಬಂಧನ.

ಕಡಬ ತಾಲ್ಲೂಕಿನ ಮರ್ಧಾಳದಲ್ಲಿ ಮಸೀದಿ ಕಾಂಪೌಂಡ್ ಒಳಗೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿರುವ ಆರೋಪದಲ್ಲಿ ಇಬ್ಬರು ಯುವಕರ ಮೇಲೆ ಪ್ರಕರಣ ದಾಖಲಾಗಿದ್ದು, ಒಬ್ಬರನ್ನು ಬಂಧಿಸಲಾಗಿದೆ.

ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್ (25) ಬಂಧಿತ ಆರೋಪಿ.
ಕೀರ್ತನ್ ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ ಎಂಬವರು ಭಾನುವಾರ ರಾತ್ರಿ ಬೈಕ್‌ನಲ್ಲಿ ಬಂದು, ಮರ್ಧಾಳ ಬದ್ರಿಯಾ ಜುಮ್ಮಾ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ವರಾಂಡದಲ್ಲಿ ನಿಂತು ‘ಜೈಶ್ರೀರಾಮ್’ ಘೋಷಣೆ ಕೂಗಿದ್ದಾರೆ. ಈ ವೇಳೆ ಮೌಲ್ವಿಯನ್ನು ನೋಡಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಜ್ಯ