ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚಿನ್ನಮ್ಮ ಅವರು ಭೇಟಿ ನೀಡಿದ್ದಾರೆ.

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚಿನ್ನಮ್ಮ ಅವರು ಭೇಟಿ ನೀಡಿದ್ದಾರೆ.

ನಿನ್ನೆ ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಅವರು ಆ.9ರ ಸೋಮವಾರ ಬೆಳಗ್ಗೆ ಶ್ರೀ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ಇಂದು ವಿವಿಧ ಸೇವೆ ನೆರವೇರಿಸಲಿದ್ದಾರೆ.

ದೇವೇಗೌಡರು ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ, ಸಕಲೇಶಪುರ ಮತ್ತು ಕುಕ್ಕೆ ಸುಬ್ರಹ್ಮಣ್ಯ ಕಡೆಗಳಲ್ಲಿ ದಟ್ಟವಾದ ಮೋಡ ಕವಿದ ವಾತಾವರಣವಿದ್ದ ಹಿನ್ನೆಲೆ ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಬಳಿಕ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಇಲ್ಲಿ ವಾಸ್ತವ್ಯ ಹೂಡಿದರು. ಇಂದು ಮದ್ಯಾಹ್ನ ವೇಳೆಗೆ ಬೆಂಗಳೂರಿಗೆ ವಾಪಸ್​ ತೆರಳಲಿದ್ದಾರೆ.

ವರದಿ: ಶಿವ ಭಟ್ ಸುಬ್ರಹ್ಮಣ್ಯ

ರಾಜ್ಯ