ಇನ್ನು ಮುಂದೆ ಕಾವೇರಿ ತೀರ್ಥೋದ್ಭವ ಸಂದರ್ಭ ತೀರ್ಥ ಕೊಂಡಯ್ಯಲು ಪ್ಲ್ಯಾಸ್ಟಿಕ್ ಪ್ಲಾಸ್ಟಿಕ್ ಕ್ಯಾನ್ ಬಳಸುವಂತಿಲ್ಲ..

ಇನ್ನು ಮುಂದೆ ಕಾವೇರಿ ತೀರ್ಥೋದ್ಭವ ಸಂದರ್ಭ ತೀರ್ಥ ಕೊಂಡಯ್ಯಲು ಪ್ಲ್ಯಾಸ್ಟಿಕ್ ಪ್ಲಾಸ್ಟಿಕ್ ಕ್ಯಾನ್ ಬಳಸುವಂತಿಲ್ಲ..

ಮಡಿಕೇರಿ ಅ.10 : ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಅ.17 ರಂದು ರಾತ್ರಿ 1.27 ನಿಮಿಷಕ್ಕೆ (18 ರ ಬೆಳಗ್ಗೆ) “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ಜರುಗಲಿದ್ದು, ಈ ಸಮಯದಲ್ಲಿ ದೇವಾಲಯಕ್ಕೆ ಬರುವ ಭಕ್ತಾದಿಗಳು / ಯಾಥ್ರಾರ್ತಿಗಳು ಶ್ರೀ ಕಾವೇರಿಯ ಪವಿತ್ರ ತೀರ್ಥವನ್ನು ಶೇಖರಿಸಿಕೊಂಡು ಹೋಗಲು ಪ್ಲ್ಯಾಸ್ಟಿಕ್ ಬಿಂದಿಗೆ, ಪ್ಲ್ಯಾಸ್ಟಿಕ್ ಬಾಟಲ್ ಮತ್ತು ಪ್ಲ್ಯಾಸ್ಟಿಕ್ ಕ್ಯಾನ್‍ಗಳನ್ನು ಬಳಕೆ ಮಾಡುತ್ತಿರುತ್ತಾರೆ.
ಆದರೆ ಅಧಿಸೂಚಿತ ಸಂಸ್ಥೆಗಳಲ್ಲಿ ನಿಷೇಧಿತ ಪ್ಲ್ಯಾಸ್ಟಿಕ್‍ಗಳನ್ನು ನಿರ್ಬಂಧಿಸುವಂತೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಬೆಂಗಳೂರು ಇವರ ಸುತ್ತೋಲೆಯಲ್ಲಿ ಸೂಚಿಸಿರುತ್ತಾರೆ. ಆದ್ದರಿಂದ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳು ಪವಿತ್ರ ತೀರ್ಥವನ್ನು ಶೇಖರಿಸಲು ಪ್ಲ್ಯಾಸ್ಟಿಕ್ ಉತ್ಪನ್ನಗಳನ್ನು ಬಳಸದಂತೆ ನಿರ್ಬಂಧಿಸಲಾಗಿದೆ ಎಂದು ಶ್ರೀಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ

ರಾಜ್ಯ