
ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.


ಜೀವನ ಕಟ್ಟಿಕೊಳ್ಳಲು ಬಂದ ಕಾರ್ಮಿಕರು ಮಡಿಕೇರಿಯಲ್ಲಿ ಬದುಕನ್ನೇ ಕಳೆದುಕೊಂಡಿದ್ದಾರೆ. ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು. ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಗುಡ್ಡ ಕುಸಿದಿದೆ. ಈ ಘಟನೆಯಿಂದ ಐವರು ಕೆಲಸ ಮಾಡುವ ಸಂದರ್ಭ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.