ಸುಳ್ಯ ತಾಲೂಕು ಬಂಟರ ಸಂಘದ ವತಿಯಿಂದ ಸಂಸದ ಕಟೀಲ್ ಅವರಿಗೆ ಸನ್ಮಾನ

ಸುಳ್ಯ ತಾಲೂಕು ಬಂಟರ ಸಂಘದ ವತಿಯಿಂದ ಸಂಸದ ಕಟೀಲ್ ಅವರಿಗೆ ಸನ್ಮಾನ


ದ.ಕ. ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನ.11ರಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುಳ್ಯದ ಬಂಟರ ಭವನಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಸುಳ್ಯ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಪ್ರಕಾಶ್ ರೈ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಂಟರ ಸಂಘದ ಉಪಾಧ್ಯಕ್ಷ ಜೆ.ಕೆ. ರೈ, ಬಂಟರ ಸಂಘದ ಅರಂತೋಡು ವಲಯದ ಪ್ರಧಾನ ಕಾರ್ಯದರ್ಶಿ ಹರೀಶ್ ರೈ ಉಬರಡ್ಕ, ಕುಸುಮಾಧರ ರೈ ಸೇರಿದಂತೆ ಬಂಟರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

ರಾಜ್ಯ