ಪುತ್ತೂರು: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ  ಪತ್ತೆ..!

ಪುತ್ತೂರು: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಮೇರ್ಲ ಎಂಬಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಆರ್ಯಾಪು ಗ್ರಾಮದ ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ(46) ಮೃತ ವ್ಯಕ್ತಿ. ಅವರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಕಾಶ್‌ ಅವರು ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದು ಮನೆ ಮಂದಿ ಬೇರೆಡೆಗೆ ತೆರಳಿದ್ದ ಸಂದರ್ಭದಲ್ಲಿ ಅವರು ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಮನೆಮಂದಿ ಮರಳಿ ಮನೆಗೆ ಬಂದ ವೇಳೆ ಈ ಘಟನೆ ಅವರ ಅರಿವಿಗೆ ಬಂದಿದೆ. ಎರಡು ದಿನಗಳ ಹಿಂದೆಯೇ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಸಂಪ್ಯ ಪೊಲೀಸ್ ಠಾಣೆಗೆ ಈ ಕುರಿತು ಮಾಹಿತಿ ನೀಡಲಾಗಿದೆ.
Uncategorized ರಾಜ್ಯ