ಬೆಳ್ತಂಗಡಿ ಎರಡು ಕರುಗಳನ್ನು ಕೊಂದು ತಿಂದ ಚಿರತೆ

ಬೆಳ್ತಂಗಡಿ ಎರಡು ಕರುಗಳನ್ನು ಕೊಂದು ತಿಂದ ಚಿರತೆ

ಬೆಳ್ತಂಗಡಿ: ಮುಂಡೂರು ಗ್ರಾಮದ ಕೇರಿಯಾರ್‌ ಗುರುವಪ್ಪ ಸಾಲ್ಯಾನ್‌ ಅವರಿಗೆ ಸೇರಿದ ಎರಡು ದನದ ಕರುಗಳ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ರವಿವಾರ ರಾತ್ರಿ ಸಂಭವಿಸಿದೆ.
ಗುರುವಪ್ಪ ತಮ್ಮ ಮನೆ ಸಮೀಪ ಕರುಗಳನ್ನು ಕಟ್ಟಿ ಹಾಕಿದ್ದರು. ರಾತ್ರಿ ಅಲ್ಲಿಗೆ ಆಗಮಿಸಿದ ಚಿರತೆ ಕರುಗಳ ಮೇಲೆ ದಾಳಿ ಮಾಡಿ ಕೊಂದು ಅನಂತರ ತೋಟಕ್ಕೆ ಎಳೆದೊಯ್ದು ತಿಂದು ಹಾಕಿರುವುದು ಕಂಡುಬಂದಿದೆ.
ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಈ ಭಾಗದಲ್ಲಿ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.
ಸದ್ಯ ಈ ಭಾಗದಲ್ಲಿ ಮತ್ತೆ ಚಿರತೆ ಸಂಚಾರ ಕಂಡು ಬಂದಿದ್ದು, ಈ ಸಂಬಂಧ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಂಡು ರಕ್ಷಣೆ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ರಾಜ್ಯ