
ಮಂಗಳೂರು: ಅಳಪೆ ಗ್ರಾಮದ ಶಿಲ್ಪ ಪಡ್ಡುವಿನಲ್ಲಿ ಏಣಿ ಮೇಲೆ ನಿಂತು ಪೇಂಟಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ಫರಂಗಿಪೇಟೆ ಅರ್ಕುಳ ನಿವಾಸಿ ವಳಚ್ಚಿಲ್ ಪದವಿನ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತ ದುರ್ದೈವಿ. ಹೆನ್ರಿ ಡಿ’ಸೋಜಾ ಎಂಬವರ ಮನೆಯಲ್ಲಿ ಮೇಲ್ಟಾವಣಿ ಬಳಿ ಕಬ್ಬಿಣದ ಏಣಿ ಮೇಲೆ ನಿಂತು ಪೇಂಟಿಂಗ್ ಮಾಡುತ್ತಿದ್ದಾಗ ಪಕ್ಕದಲ್ಲಿದ್ದ ಹೈಟೆನ್ಸನ್ ವೈರ್ ತಾಗಿ ವಿದ್ಯುತ್ ಪ್ರವಹಿಸಿ ಕೆಳಗೆ ಕುಸಿದು ಬಿದ್ದರು. ಅವರ ಜತೆ ಕೆಲಸ ಮಾಡುತ್ತಿದ್ದ ರಾಜೇಶ್ ಮತ್ತು ಬಾಲಕೃಷ್ಣ ಅವರು ಆಸ್ಪತ್ರೆಗೆ ಕರೆದೊಯ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
