ಬಂಟ್ವಾಳ: ಅಡುಗೆ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ

ಬಂಟ್ವಾಳ: ಅಡುಗೆ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ

ಬಂಟ್ವಾಳ: ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ.

ಗ್ಯಾಸ್ ಸೋರಿಕೆಯಾಗಿರುವುದು ತಿಳಿಯದೆ ರಾತ್ರಿ ಅಡುಗೆ ಮಾಡಲು ಗ್ಯಾಸ್ ಉರಿಸಲು ಹೋದಾಗ ಬೆಂಕಿ ಹೊತ್ತಿಕೊಂಡಿದೆ. ಬಂಟ್ವಾಳ ಅಗ್ನಿ ಶಾಮಕ ದಳದವರು ಬೆಂಕಿ ಆರಿಸಿದರು. ಗ್ರಾಮಸ್ಥರು ಸಹಕರಿಸಿದರು. ಗ್ರಾಮ ಕರಣಿಕರಾದ ಅಶ್ವಿನಿಯವರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.

ರಾಜ್ಯ