ಕಡಬ: ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು..!

ಕಡಬ: ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು..!

ಕಡಬದ ಆಲಂಕಾರಿನಲ್ಲಿ ಯುವಕನೊಬ್ಬ ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.

ಕಡಬ ತಾಲೂಕು ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್‌ (27) ಮೃತ ಯುವಕ.

ನ. 12ರಂದು ಕಾಮಗಾರಿ ನಡೆಯುತ್ತಿದ್ದ ತನ್ನ ನೂತನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ತತ್‌ಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್‌ ಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಮಂಗಳವಾರ ಸಂಜೆ ವೇಳೆ ಚಿಕಿತ್ಸೆ ಫ‌ಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಮೃತರು ವಿವಿಧ ಸಂಘಟನೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದುಕೊಂಡು ಸಮಾಜಸೇವಕರಾಗಿದ್ದರು. ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ರಾಜ್ಯ