ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಪುತ್ತೂರು: 5 ವರ್ಷಗಳ ಹಿಂದೆ ಪುತ್ತೂರಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ವಿಟ್ಲಮುಡ್ನೂರು ಗ್ರಾಮದ ಪೂರ್ಲಪಾಡಿ ನಿವಾಸಿ ಪುರಂದರ ಗೌಡ (36) ಎಂದು ಗುರುತಿಸಲಾಗಿದೆ.2019ರಲ್ಲಿ ಪುತ್ತೂರಿನಲ್ಲಿ ಹಲ್ಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ವಿಟ್ಲಮುಡ್ನೂರು ಗ್ರಾಮದ ಪೂರ್ಲಪಾಡಿ ನಿವಾಸಿ ಪುರಂದರ ಗೌಡ(36) ಇವರು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.

ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ತನಿಖೆ ನಡೆಸಿದ ಪುತ್ತೂರು ನಗರ ಪೊಲೀಸರು ಡಿವೈಎಸ್ಪಿ ಅರುಣ ನಾಗೇ ಗೌಡ ಅವರ ಮಾರ್ಗದರ್ಶನದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ನಿರ್ದೇಶನದಂತೆ ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ಗಳಾದ ಸುರೇಶ್ ಮತ್ತು ವಸಂತ್ ಅವರು ಆರೋಪಿ ಪುರಂದರ ಗೌಡ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ರಾಜ್ಯ