ಸುಳ್ಯ : ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಬ್ಯಾನರ್ ಹರಿದು ಹಾಕಿದ ಪ್ರಕರಣ; ಮಾನಸಿಕ ಅಸ್ವಸ್ಥ ವ್ಯಕ್ತಿಯಿಂದ ಕೃತ್ಯ-ತನಿಖೆ ಮುಂದುವರಿಕೆ

ಸುಳ್ಯ : ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಬ್ಯಾನರ್ ಹರಿದು ಹಾಕಿದ ಪ್ರಕರಣ; ಮಾನಸಿಕ ಅಸ್ವಸ್ಥ ವ್ಯಕ್ತಿಯಿಂದ ಕೃತ್ಯ-ತನಿಖೆ ಮುಂದುವರಿಕೆ

ಖಾಸಗಿ ಬಸ್ ನಿಲ್ದಾಣದ ಬಳಿ, ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್‌‌ನ ಮದ್ಯಭಾಗವನ್ನು, ಯಾರೋ ಹರಿದು ತೆಗೆದುಕೊಂಡು ಹೋಗಿದ್ದು ಈ ಬಗ್ಗೆ ಆಟೊ ರಿಕ್ಷಾ ಸಂಘದ ಅಧ್ಯಕ್ಷರು ಸುಳ್ಯ ಪೊಲೀಸ್‌‌ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೃತ್ಯವೆಸಗಿದವರ ಪತ್ತೆಗಾಗಿ, ಸುಳ್ಯದಲ್ಲಿರುವ ಸುಮಾರು 40 ಸಿಸಿ ಕ್ಯಾಮಾರಗಳ ಪೂಟೇಜ್‌‌ಗಳನ್ನು ಪರಿಶೀಲನೆ ಮಾಡಿದಾಗ, ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುತ್ತಿರುವ ಅಪರಿಚಿತ ವಯಸ್ಸಾದ ವ್ಯಕ್ತಿಯೋರ್ವ ಸದರಿ ಬ್ಯಾನರ್ ಹರಿದು ತನ್ನ ಕೈಯಲ್ಲಿ ಹಿಡಿದುಕೊಂಡು, ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ತಿಳಿದುಬಂದಿರುತ್ತದೆ. ಹಾಗೂ ಬಳಿಕ ಸುಳ್ಯದ ವಿವೇಕಾನಂದ ಸರ್ಕಲ್‌‌ ಬಳಿ ಹರಿದ ಬ್ಯಾನರ್ ತುಂಡನ್ನು ಇಟ್ಟು ರಾಮನ ಜಪ ಮಾಡಿದ್ದನ್ನು ಸಾರ್ವಜನಿಕರ ನೋಡಿರುವುದು ತನಿಖೆಯಿಂದ ತಿಳಿದುಬಂದಿರುತ್ತದೆ.

ಹರಿದ ಬ್ಯಾನರ್‌‌ ತುಂಡನ್ನು ಪರಿಶೀಲಿಸಲಾಗಿ ಅಯೋಧ್ಯೆಯ ಫೋಟೋಗಾಗಲಿ ಹಾಗೂ ಶ್ರೀರಾಮನ ಫೋಟೋಗಾಗಲಿ ಯಾವುದೇ ರೀತಿಯ ಹಾನಿಯಾಗಿರುವುದು ಕಂಡುಬಂದಿರುವುದಿಲ್ಲ. ತನಿಖೆ ಮುಂದುವರಿಯುತ್ತಿದೆ.

ರಾಜ್ಯ