ಮಂಗಳೂರು: ಲೈಂಗಿಕ ಕಿರುಕುಳ; ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ವಿರುದ್ಧ ಪ್ರಕರಣ ದಾಖಲು..!

ಮಂಗಳೂರು: ಲೈಂಗಿಕ ಕಿರುಕುಳ; ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ವಿರುದ್ಧ ಪ್ರಕರಣ ದಾಖಲು..!

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ಲೈಂಗಿಕ, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆಂದು ಕಚೇರಿ ಸಿಬ್ಬಂದಿ ಉರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಕುರಿತು ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್ವಾಲ್ ಅವರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು ಉರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಮುಡಾ ಆಯುಕ್ತರಾದ ಮನ್ಸೂರು ಆಲಿ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರಾಧಿಕಾರದ ಮಹಿಳಾ ಸಿಬ್ಬಂದಿಯೊಬ್ಬರು ಶುಕ್ರವಾರ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 354ರ (ಮಹಿಳೆಯ ಮೇಲೆ ಹಲ್ಲೆ ಮತ್ತು ಮಾನಭಂಗ ಯತ್ನ) ಹಾಗೂ 354 ಎ(ಲೈಂಗಿಕ ಕಿರುಕುಳ) ಅಡಿ ಉರ್ವಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದು ಪೊಲೀಸ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ರಾಜ್ಯ