ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಓಮ್ನಿ ಕಾರು

ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಓಮ್ನಿ ಕಾರು

ವಿಟ್ಲ ಸಮೀಪದ ಕಂಬಳಬೆಟ್ಟು ದರ್ಗಾದ ಬಳಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ನಡೆದಿದೆ.

ಸುಳ್ಯ ಮೂಲದ ವ್ಯಕ್ತಿಯೋರ್ವರು ಚಲಾಯಿಸುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ ಕಂಬಳಬೆಟ್ಟು ದರ್ಗಾದ ಬಳಿ ತರಕಾರಿ ಅಂಗಡಿಯೊಂದಕ್ಕೆ ನುಗ್ಗಿದೆ ಎನ್ನಲಾಗಿದೆ. ತರಕಾರಿ ಅಂಗಡಿ ಬಳಿ ನಿಲ್ಲಿಸಿದ್ದ ಮಾಲಕರ ದ್ವಿಚಕ್ರ ವಾಹನಕ್ಕೂ ಕಾರು ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ರಾಜ್ಯ