
ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳ್ಳರು ಹಾಡಹಗಲೇ ಮನೆಗೆ ನುಗ್ಗಿ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಮನೆಯ ಹೆಂಚು ತೆಗೆದು ಒಳ ಹೊಕ್ಕ ಕಳ್ಳರು ಮನೆಯಲ್ಲಿದ್ದ ಕಪಾಟುಗಳನ್ನು ಒಡೆದು ಹಾಕಿ ಮನೆ ಪೂರ್ತಿ ಜಾಲಾಡಿ ಮನೆಯಲ್ಲಿದ್ದ 100 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಡೈರಿ ಸಮೀಪದ ಅರುಣ್ ಹೆಚ್ಎಸ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ.
ಮನೆಯವರು ಕೆಲಸಕ್ಕೆ ಹೋದ ಸಂದರ್ಭ ನೋಡಿ ಕಳ್ಳರು ಕೈಚಳಕ ತೋರಿದ್ದಾರೆ.ಘಟನಾ ಸ್ಥಳಕ್ಕೆ ಕಂಕನಾಡಿ ನಗರ ಠಾಣಾ ನೀರಿಕ್ಷಕರು, ಉಪ ನೀರಿಕ್ಷಕರು, ಹಾಗೂ ಕ್ರೈಂ ಸಿಬ್ಬಂದಿಯವರು ಹಾಗೂ ಶ್ವಾನ ತಂಡ, ಬೆರಳಚ್ಚು ತಂಡ ಭೇಟಿ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಘಟನೆ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
